ಪೋಸ್ಟ್‌ಗಳು

ಏಪ್ರಿಲ್, 2025 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಶಮಂತಕೋಪಾಖ್ಯಾನ, ಚತುರ್ಥಿ ಚಂದ್ರನ ದರ್ಶನ ಮುಕ್ತಿ

ಇಮೇಜ್
ಶಮಂತಕೋಪಾಖ್ಯಾನ: ಗಣೇಶ ಚತುರ್ಥಿಯ ಹಬ್ಬದಂದು ತನ್ನ ಭಕ್ತರು ಅರ್ಪಿಸಿದ ಬಗೆಬಗೆಯ ಭಕ್ಷ್ಯಗಳನ್ನು ಹೊಟ್ಟೆಬಿರಿಯ ತಿಂದ ಗಣಪನನ್ನು ಹೊರಲಾರದೆ ಹೊರುತ್ತಿದ್ದ ಮೂಷಿಕವಾಹನ. ಹೊಟ್ಟೆಯ ಭಾರದಿಂದ ಆಯ ತಪ್ಪಿ ಬಿದ್ದ ಗಣಪನನ್ನು ನೋಡಿ ಚಂದ್ರ ನಕ್ಕನಂತೆ. ಅದರಿಂದ ಅವಮಾನಿತನಾದ ಗಣಪ, ಚೌತಿಯ ದಿನದಂದು ಚಂದ್ರನ ದರ್ಶನ ಮಾಡಿದವರಿಗೆ ಅಪವಾದ ಬರಲಿ ಎಂದು ಶಪಿಸಿದನಂತೆ. ಉಂಡವನು ಗಣಪ, ನಕ್ಕವನು ಚಂದ್ರ, ಆದರೆ, ಶಾಪ ಮಾತ್ರ ಚಂದ್ರನನ್ನು ನೋಡಿದವರಿಗೆ!! “ಚೌತಿಯ ಚಂದ್ರನ ದರುಶನದಿಂದ ಕಾಡಿತು ಕೃಷ್ಣಗೆ ಅಪವಾದ,ಈ ಕತೆ ಕೇಳಲು ದೊರೆವುದು ಜನರಿಗೆ ದೋಷದ ಪರಿಹಾರ.. “ ಹೀಗೊಂದು ಹಾಡನ್ನು ಕೇಳಿದ್ದೇವೆ. ಉಳಿದ ದಿನಗಳಲ್ಲಿ ಸಾಮಾನ್ಯವಾಗಿ ಸಂಜೆ ಮನೆಯ ಹೊರಗೆ ಬಂದು ಚಂದ್ರನನ್ನು ನೋಡುವುದಿಲ್ಲ, ನೋಡಿದ್ದರೂ ಗಮನಿಸುವುದಿಲ್ಲ. ಆದರೆ, ಚೌತಿಯ ದಿನ ತಪ್ಪದೇ ಚಂದ್ರದರ್ಶನವಾಗುತ್ತದೆ! ಕಾರಣವಿಷ್ಟೆ, ಅಕ್ಕ-ಪಕ್ಕದ ಮನೆಯವರು ಹಬ್ಬದ ದಿನ ಸಂಜೆ ಅರಶಿನ-ಕಂಕುಮಕ್ಕೆ ಬನ್ನಿ ಎಂದು ಆಹ್ವಾನಿಸಿರುತ್ತಾರೆ. ಸದಾ ಸಂಜೆ ಮನೆಯೊಳಗೆ ಇರುವವರು, ಹಬ್ಬದ ದಿನ ಸಂಜೆ ಅಕ್ಕ-ಪಕ್ಕದ ಮನೆಗೆ ಹೋಗುವಾಗ ಅಯಾಚಿತವಾಗಿ ಆಕಾಶದತ್ತ ನೋಡಿರುತ್ತೇವೆ. ಸಾಮಾನ್ಯವಾಗಿ ಮೋಡದ ಮರೆಯಲ್ಲೋ, ಮರಗಳ ಎಡೆಯಲ್ಲೋ ಇರುವ ಚಂದ್ರ ಚೌತಿಯಂದು ಲಕಲಕನೇ ಹೊಳೆಯುತ್ತಾ ದರ್ಶನ ಕೊಡುತ್ತಾನೆ. ಅಲ್ಲಿಗೆ, ಪ್ರತಿವರ್ಷವೂ ಅಪವಾದ ಗ್ಯಾರಂಟಿ ಅಂತ ಆಯ್ತಲ್ಲ. ಅದಕ್ಕೂ ಶಾಸ್ತ್ರೀಯ ಪರಿಹಾರ ಬಹಳ ಸರಳ. ಶಮಂ...

ಬೇಸಿಗೆಯಲ್ಲಿ ತಿನ್ನಬೇಕಾದ ಆಹಾರಗಳು ಯಾವವು?

 ಬೇಸಿಗೆಯಲ್ಲಿ ತಿನ್ನಬೇಕಾದ ಆಹಾರಗಳು ಯಾವವು? 1. ಕಲ್ಲಂಗಡಿ ಈ ಹಣ್ಣಿನಲ್ಲಿ ಸುಮಾರು 90% ನೀರಿನ ಅಂಶ ಇರುವುದರಿಂದ ಬೇಸಿಗೆಯಲ್ಲಿ ಸೇವಿಸಲೇಬೇಕಾದ ಹಣ್ಣಾಗಿದೆ. ಅದಲ್ಲದೆ ಕಲ್ಲಂಗಡಿ ಸೇವನೆಯು ದೇಹವನ್ನು ಹೈಡ್ರೇಟ್ ಮತ್ತು ತಂಪಾಗಿಡಲು ಸಹಾಯ ಮಾಡುತ್ತದೆ. ಇದು ವಿಟಮಿನ್ ಸಿ, ಎ ಮತ್ತು ಪೊಟ್ಯಾಸಿಯಮ್ ನ ಉತ್ತಮ ಮೂಲವಾಗಿದೆ, ಇದು ದೇಹದಲ್ಲಿ ಎಲೆಕ್ಟ್ರೋಲೈಟ್ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. 2. ಸೌತೆಕಾಯಿ ಈ ತರಕಾರಿ ಮತ್ತೊಂದು ಹೈಡ್ರೇಟಿಂಗ್ ಆಹಾರವಾಗಿದ್ದು, ಇದು ನೀರಿನ ಅಂಶದಿಂದ ಸಮೃದ್ಧವಾಗಿದೆ ಮತ್ತು ಕಡಿಮೆ ಕ್ಯಾಲೊರಿಗಳನ್ನು ಹೊಂದಿದೆ. ಈ ತರಕಾರಿ ದೇಹದ ತಾಪಮಾನವನ್ನು ನಿಯಂತ್ರಿಸಲು ಮತ್ತು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಸೌತೆಕಾಯಿಗಳನ್ನು ಸಲಾಡ್ಗಳು, ಸ್ಮೂಥಿಗಳು ಅಥವಾ ಸೈಡ್ ಡಿಶ್ ಆಗಿ ಸೇವಿಸಬಹುದು. 3. ಎಳನೀರು ಎಳನೀರು ನೈಸರ್ಗಿಕವಾಗಿ ಬಾಯಾರಿಕೆಯನ್ನು ನೀಗಿಸುವ ಪಾನೀಯವಾಗಿದ್ದು, ಇದು ಪೊಟ್ಯಾಸಿಯಮ್, ಸೋಡಿಯಂ ಮತ್ತು ಮೆಗ್ನೀಸಿಯಮ್ನಂತಹ ಎಲೆಕ್ಟ್ರೋಲೈಟ್ಗಳಿಂದ ಸಮೃದ್ಧವಾಗಿದೆ. ಜೊತೆಗೆ ಎಳನೀರು, ಬಿಸಿ ವಾತಾವರಣದಲ್ಲಿ ದ್ರವಗಳನ್ನು ಮರುಪೂರಣ ಮಾಡಲು ಸಹಾಯ ಮಾಡುತ್ತದೆ ಮತ್ತು ದೇಹವನ್ನು ಹೈಡ್ರೇಟ್ ಆಗಿರಿಸುತ್ತದೆ. ಇದು ಉತ್ಕರ್ಷಣ ನಿರೋಧಕಗಳ ಅತ್ಯುತ್ತಮ ಮೂಲವಾಗಿದೆ. 4. ಪುದೀನಾ ಪುದೀನಾದಲ್ಲಿ ಮೆಂಥಾಲ್ ಇದ್ದು, ಇದು ದೇಹವನ್ನು ತಂಪಾಗಿ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಜೀರ್...