ಪೋಸ್ಟ್‌ಗಳು

ಚಂದ್ರ ದರ್ಶನ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಶಮಂತಕೋಪಾಖ್ಯಾನ, ಚತುರ್ಥಿ ಚಂದ್ರನ ದರ್ಶನ ಮುಕ್ತಿ

ಇಮೇಜ್
ಶಮಂತಕೋಪಾಖ್ಯಾನ: ಗಣೇಶ ಚತುರ್ಥಿಯ ಹಬ್ಬದಂದು ತನ್ನ ಭಕ್ತರು ಅರ್ಪಿಸಿದ ಬಗೆಬಗೆಯ ಭಕ್ಷ್ಯಗಳನ್ನು ಹೊಟ್ಟೆಬಿರಿಯ ತಿಂದ ಗಣಪನನ್ನು ಹೊರಲಾರದೆ ಹೊರುತ್ತಿದ್ದ ಮೂಷಿಕವಾಹನ. ಹೊಟ್ಟೆಯ ಭಾರದಿಂದ ಆಯ ತಪ್ಪಿ ಬಿದ್ದ ಗಣಪನನ್ನು ನೋಡಿ ಚಂದ್ರ ನಕ್ಕನಂತೆ. ಅದರಿಂದ ಅವಮಾನಿತನಾದ ಗಣಪ, ಚೌತಿಯ ದಿನದಂದು ಚಂದ್ರನ ದರ್ಶನ ಮಾಡಿದವರಿಗೆ ಅಪವಾದ ಬರಲಿ ಎಂದು ಶಪಿಸಿದನಂತೆ. ಉಂಡವನು ಗಣಪ, ನಕ್ಕವನು ಚಂದ್ರ, ಆದರೆ, ಶಾಪ ಮಾತ್ರ ಚಂದ್ರನನ್ನು ನೋಡಿದವರಿಗೆ!! “ಚೌತಿಯ ಚಂದ್ರನ ದರುಶನದಿಂದ ಕಾಡಿತು ಕೃಷ್ಣಗೆ ಅಪವಾದ,ಈ ಕತೆ ಕೇಳಲು ದೊರೆವುದು ಜನರಿಗೆ ದೋಷದ ಪರಿಹಾರ.. “ ಹೀಗೊಂದು ಹಾಡನ್ನು ಕೇಳಿದ್ದೇವೆ. ಉಳಿದ ದಿನಗಳಲ್ಲಿ ಸಾಮಾನ್ಯವಾಗಿ ಸಂಜೆ ಮನೆಯ ಹೊರಗೆ ಬಂದು ಚಂದ್ರನನ್ನು ನೋಡುವುದಿಲ್ಲ, ನೋಡಿದ್ದರೂ ಗಮನಿಸುವುದಿಲ್ಲ. ಆದರೆ, ಚೌತಿಯ ದಿನ ತಪ್ಪದೇ ಚಂದ್ರದರ್ಶನವಾಗುತ್ತದೆ! ಕಾರಣವಿಷ್ಟೆ, ಅಕ್ಕ-ಪಕ್ಕದ ಮನೆಯವರು ಹಬ್ಬದ ದಿನ ಸಂಜೆ ಅರಶಿನ-ಕಂಕುಮಕ್ಕೆ ಬನ್ನಿ ಎಂದು ಆಹ್ವಾನಿಸಿರುತ್ತಾರೆ. ಸದಾ ಸಂಜೆ ಮನೆಯೊಳಗೆ ಇರುವವರು, ಹಬ್ಬದ ದಿನ ಸಂಜೆ ಅಕ್ಕ-ಪಕ್ಕದ ಮನೆಗೆ ಹೋಗುವಾಗ ಅಯಾಚಿತವಾಗಿ ಆಕಾಶದತ್ತ ನೋಡಿರುತ್ತೇವೆ. ಸಾಮಾನ್ಯವಾಗಿ ಮೋಡದ ಮರೆಯಲ್ಲೋ, ಮರಗಳ ಎಡೆಯಲ್ಲೋ ಇರುವ ಚಂದ್ರ ಚೌತಿಯಂದು ಲಕಲಕನೇ ಹೊಳೆಯುತ್ತಾ ದರ್ಶನ ಕೊಡುತ್ತಾನೆ. ಅಲ್ಲಿಗೆ, ಪ್ರತಿವರ್ಷವೂ ಅಪವಾದ ಗ್ಯಾರಂಟಿ ಅಂತ ಆಯ್ತಲ್ಲ. ಅದಕ್ಕೂ ಶಾಸ್ತ್ರೀಯ ಪರಿಹಾರ ಬಹಳ ಸರಳ. ಶಮಂ...