ಪೋಸ್ಟ್‌ಗಳು

ಜೇಡರ ದಾಸಿಮಯ್ಯ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಜೇಡರ ದಾಸಿಮಯ್ಯನವರ ವಚನಗಳು

ಇಮೇಜ್
​ಅನುಭಾವವಿಲ್ಲದ ಭಕ್ತಿ ತಲೆಕೆಳಗಾದುದಯ್ಯಾ. ಅನುಭಾವ ಭಕ್ತಿಗಾಧಾರ; ಅನುಭಾವ ಭಕ್ತಿಗೆ ನೆಲೆವನೆ. ಅನುಭಾವ ಉಳ್ಳವರ ಕಂಡು ತುರ್ಯ ಸಂಭಾಷಣೆಯ ಬೆಸಗೊಳ್ಳದಿದ್ದಡೆ ನರಕದಲ್ಲಿಕ್ಕಯ್ಯಾ! ರಾಮನಾಥ.  ಅಂತರಂಗ ಬಹಿರಂಗದಲ್ಲಿ ಸರ್ವಾಚಾರ ಸಂಪತ್ತಿನ ಆಚರಣೆಯನರಿಯದ ಮೂಢಾತ್ಮಂಗೆ ಲಿಂಗಾಂಗ ಸಮರಸವ ಹೇಳಿ ಸರ್ವಾಂಗ ಸ್ನಾನಧೂಳನ ನಾಲ್ವತ್ತೆಂಟು ಸ್ಥಾನಂಗಳಲ್ಲಿ ಧಾರಣ ಕ್ರಿಯಾಭಸಿತವ ಧರಿಸುವ ನಿರ್ಣಯವ ಹೇಳಿ ಅಂತರಂಗದ ಜಪವ ಹೇಳುವನೊಬ್ಬ ಆಚಾರದ್ರೋಹಿ ನೋಡಾ, ರಾಮನಾಥ.  ಅಂಬಲಿ ಅಲೆಯಾಗಿ, ತುಂಬೆಯ ಮೇಲೋಗರವಾಗಿ, ಉಂಬ ಸದುಭಕ್ತನ ಮನೆಯಾಗಿ, ಲೋಕದ ಡಂಭಕರ ಮನೆ ಬೇಡ, ರಾಮನಾಥ  ಅಡಗ ತಿಂಬರು; ಕಣಿಕದ ಅಡಿಗೆಯಿರಲಿಕೆ. ಕುಡಿವರು ಸುರೆಯ! ಹಾಲಿರಲಿಕೆ. ಹಡದುಂಬ ವೇಶಿಯನೊಲ್ಲದೆ ಹೆರರ ಮಡದಿಗಳುಪುವ ಸತ್ತ ನಾಯ ತಿಂಬ ಹಡ್ಡಿಗರನೇನೆಂಬೆನೈ! ರಾಮನಾಥ.  ಅಚ್ಚ ಶಿವೈಕ್ಯಂಗೆ ಹೊತ್ತಾರೆ ಅಮವಾಸೆ; ಮಟ್ಟ ಮಧ್ಯಾಹ್ನ ಸಂಕ್ರಾಂತಿ; ಮತ್ತೆ ಅಸ್ತಮಾನ ಪೌರ್ನಮಿ ಹುಣ್ಣಿಮೆ; ಭಕ್ತನ ಮನೆಯ ಅಂಗಳವೆ ವಾರಣಾಸಿ ಕಾಣಾ! ರಾಮನಾಥ.  ಅರ್ಥವುಂಟೆಂದು ಅಹಂಕರಿಸಿ ಮಾಡುವನ ಭಕ್ತಿ ತೊತ್ತಿನ ಕೂಟ, ತೊರೆಯನ ಮೇಳದಂತೆ. ತನು-ಮನ-ಧನದಲ್ಲಿ ವಂಚನೆಯುಳ್ಳ ಪ್ರಪಂಚಿಯ ಮನೆಯ ಕೂಳು ಶುನಕನ ಬಾಯ ಎಲುವ ಪ್ರತಿಶುನಕ ತಿಂದಂತೆ ಕಾಣಾ ! ರಾಮನಾಥ.  ಅಂಗಲಿಂಗದ ಒಳಗೆ ಲಿಂಗಕಂಗಳು ಬೆಳಗು, ಹಿಂಗಲಾಪುದೆ ಹೇಳು ಅಜ್ಞಾನವ! ಸಂಗಸುಖಮಥನದ ಅಸಂಗದಿಂದದನರಿದು ಹಿಂಗ...