ಪೋಸ್ಟ್‌ಗಳು

ವಚನಗಳು ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಜೇಡರ ದಾಸಿಮಯ್ಯನವರ ವಚನಗಳು

ಇಮೇಜ್
​ಅನುಭಾವವಿಲ್ಲದ ಭಕ್ತಿ ತಲೆಕೆಳಗಾದುದಯ್ಯಾ. ಅನುಭಾವ ಭಕ್ತಿಗಾಧಾರ; ಅನುಭಾವ ಭಕ್ತಿಗೆ ನೆಲೆವನೆ. ಅನುಭಾವ ಉಳ್ಳವರ ಕಂಡು ತುರ್ಯ ಸಂಭಾಷಣೆಯ ಬೆಸಗೊಳ್ಳದಿದ್ದಡೆ ನರಕದಲ್ಲಿಕ್ಕಯ್ಯಾ! ರಾಮನಾಥ.  ಅಂತರಂಗ ಬಹಿರಂಗದಲ್ಲಿ ಸರ್ವಾಚಾರ ಸಂಪತ್ತಿನ ಆಚರಣೆಯನರಿಯದ ಮೂಢಾತ್ಮಂಗೆ ಲಿಂಗಾಂಗ ಸಮರಸವ ಹೇಳಿ ಸರ್ವಾಂಗ ಸ್ನಾನಧೂಳನ ನಾಲ್ವತ್ತೆಂಟು ಸ್ಥಾನಂಗಳಲ್ಲಿ ಧಾರಣ ಕ್ರಿಯಾಭಸಿತವ ಧರಿಸುವ ನಿರ್ಣಯವ ಹೇಳಿ ಅಂತರಂಗದ ಜಪವ ಹೇಳುವನೊಬ್ಬ ಆಚಾರದ್ರೋಹಿ ನೋಡಾ, ರಾಮನಾಥ.  ಅಂಬಲಿ ಅಲೆಯಾಗಿ, ತುಂಬೆಯ ಮೇಲೋಗರವಾಗಿ, ಉಂಬ ಸದುಭಕ್ತನ ಮನೆಯಾಗಿ, ಲೋಕದ ಡಂಭಕರ ಮನೆ ಬೇಡ, ರಾಮನಾಥ  ಅಡಗ ತಿಂಬರು; ಕಣಿಕದ ಅಡಿಗೆಯಿರಲಿಕೆ. ಕುಡಿವರು ಸುರೆಯ! ಹಾಲಿರಲಿಕೆ. ಹಡದುಂಬ ವೇಶಿಯನೊಲ್ಲದೆ ಹೆರರ ಮಡದಿಗಳುಪುವ ಸತ್ತ ನಾಯ ತಿಂಬ ಹಡ್ಡಿಗರನೇನೆಂಬೆನೈ! ರಾಮನಾಥ.  ಅಚ್ಚ ಶಿವೈಕ್ಯಂಗೆ ಹೊತ್ತಾರೆ ಅಮವಾಸೆ; ಮಟ್ಟ ಮಧ್ಯಾಹ್ನ ಸಂಕ್ರಾಂತಿ; ಮತ್ತೆ ಅಸ್ತಮಾನ ಪೌರ್ನಮಿ ಹುಣ್ಣಿಮೆ; ಭಕ್ತನ ಮನೆಯ ಅಂಗಳವೆ ವಾರಣಾಸಿ ಕಾಣಾ! ರಾಮನಾಥ.  ಅರ್ಥವುಂಟೆಂದು ಅಹಂಕರಿಸಿ ಮಾಡುವನ ಭಕ್ತಿ ತೊತ್ತಿನ ಕೂಟ, ತೊರೆಯನ ಮೇಳದಂತೆ. ತನು-ಮನ-ಧನದಲ್ಲಿ ವಂಚನೆಯುಳ್ಳ ಪ್ರಪಂಚಿಯ ಮನೆಯ ಕೂಳು ಶುನಕನ ಬಾಯ ಎಲುವ ಪ್ರತಿಶುನಕ ತಿಂದಂತೆ ಕಾಣಾ ! ರಾಮನಾಥ.  ಅಂಗಲಿಂಗದ ಒಳಗೆ ಲಿಂಗಕಂಗಳು ಬೆಳಗು, ಹಿಂಗಲಾಪುದೆ ಹೇಳು ಅಜ್ಞಾನವ! ಸಂಗಸುಖಮಥನದ ಅಸಂಗದಿಂದದನರಿದು ಹಿಂಗ...

ಅಕ್ಕಮಹಾದೇವಿಯ ವಚನಗಳು

ಇಮೇಜ್
೧ ಚಿನ್ನದ ಸಂಕೋಲೆಯಾದಡೇನು, ಬಂಧನವಲ್ಲವೆ? ಮುತ್ತಿನ ಬಲೆಯಾದಡೇನು, ತೊಡರಲ್ಲವೆ? ನಚ್ಚುಮಚ್ಚಿನ ಭಕ್ತಿಯಲ್ಲಿ ಸಿಕ್ಕಿಕೊಂಡಿದ್ದರೆ ಭವ ಹಿಂಗುವುದೇ ಚೆನ್ನಮಲ್ಲಿಕಾರ್ಜುನ?  ೨ ತೆರಣಿಯ ಹುಳು ತನ್ನ ಸ್ನೇಹದಿಂದ ಮನೆಯ ಮಾಡಿ ತನ್ನ ನೂಲು ತನ್ನನೇ ಸುತ್ತಿ ಸುತ್ತಿ ಸಾವ ತೆರನಂತೆ ಮನ ಬಂದುದ ಬಯಸಿ ಬಯಸಿ ಬೇವುತ್ತಿರುವೆನಯ್ಯ! ಅಯ್ಯ, ಎನ್ನ ಮನದ ದುರಾಶೆಯ ಮಾಣಿಸಿ ನಿಮ್ಮತ್ತ ತೋರಾ, ಚೆನ್ನಮಲ್ಲಿಕಾರ್ಜುನ  ೩ ಗುರುವಿನಿಂದ ಲಿಂಗವ ಕಂಡೆ, ಜಂಗಮವ ಕಂಡೆ ಗುರುವಿನಿಂದ ಪಾದೋದಕವ ಕಂಡೆ, ಪ್ರಸಾದವ ಕಂಡೆ ಗುರುವಿನಿಂದ ನನ್ನ ನಾ ಕಂಡೆ, ಚೆನ್ನಮಲ್ಲಿಕಾರ್ಜುನ  ೪ ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಂಗಳಿಗಂಜಿದೊಡೆಂತಯ್ಯ? ಸಮುದ್ರದ ತಡಿಯಲೊಂದು ಮನೆಯ ಮಾಡಿ ನೊರೆತೆರೆಗಳಿಗಂಜಿದೊಡೆಂತಯ್ಯ? ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ ನಾಚಿದೊಡೆಂತಯ್ಯ? ಚೆನ್ನಮಲ್ಲಿಕಾಜುನದೇವ ಕೇಳಯ್ಯ ಲೋಕದೊಳಗೆ ಹುಟ್ಟಿದ ಬಳಿಕ ಸ್ತುತಿ-ನಿಂದೆಗಳು ಬಂದರೆ ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು  ೫ ಕಾಯ ಕರ್ರನೆ ಕುಂದಿದರೇನಯ್ಯ? ಕಾಯ ಮಿರ್ರನೆ ಮಿಂಚಿದರೇನಯ್ಯ? ಅಂತರಂಗ ಶುದ್ಧವಾದ ಬಳಿಕ ಚೆನ್ನಮಲ್ಲಿಕಾರ್ಜುನನನೊಲಿದ ಕಾಯ ಎಂತಾದಡೆಮಗೇನಯ್ಯ?  ೬ ನಾಳೆ ಬರುವುದು ನಮಗಿಂದೇ ಬರಲಿ ಇಂದು ಬರುವುದು ನಮಗೀಗಲೇ ಬರಲಿ ಆಗೀಗಲೆನ್ನದಿರೊ ಚೆನ್ನಮಲ್ಲಿಕಾರ್ಜುನ  ೭ ಮರವಿದ್ದು ಫಲವೇನು? ನೆಳಲಿಲ್ಲದನ್ನಕ! ಧನವಿದ್ದು ಫಲವೇನು ದಯವಿಲ...