ಜೀವನದಲ್ಲಿ ನಾವು ಯಾರ ಬಗ್ಗೆ ಯೋಚಿಸಬೇಕು..
ಒಂದು ದಿನ ಯಮಧರ್ಮರಾಯ ಒಂದು ವ್ಯಕ್ತಿಯ ಪ್ರಾಣವನ್ನು ಕೊಂಡೊಯ್ಯಲು ಭೂಮಿಗೆ ಬಂದ. ಆದರೆ ಪ್ರಾಣ ಕೊಂಡೊಯ್ಯಬೇಕಾಗಿದ್ದ ವ್ಯಕ್ತಿಯೇ ಯಮಧರ್ಮನಿಗೆ ಎದುರಾದ. ಯಮನಿಗೆ ಭೂಲೋಕ ಸುತ್ತಿ ಸುತ್ತಿ ದಾಹವಾಗಿರುತ್ತು. ಅವನಿಗೆ ಕುಡಿಯಲು ನೀರು ಕೇಳುತ್ತಾನೆ. ಸಾಯಬೇಕಾರುವ ವ್ಯಕ್ತಿಯೇ ನೀರು ಕೊಟ್ಟು ದಾಹ ತೀರಿಸುತ್ತಾನೆ ಆದರೆ ಯಮ ಕೊಂಡೊಯ್ಯಬೇಕಾರುವ ವ್ಯಕ್ತಿ ಅವನೇ ಎಂದು ತಿಳಿದು ಒಂದು ವರ ಕೊಡುತ್ತಾನೆ. ಏನೆಂದರೆ ಒಂದು ಹಣೆಬರಹದ ಪುಸ್ತಕ ಕೊಟ್ಟು ಇದರಲ್ಲಿ ನಿನಗೆ ಅಂತ ಒಂದು ಹಾಳೆ ಇದೆ, ನಿನಗೆ ಏನು ಬೇಕೋ ಅದನ್ನು ಬರೆದುಕೊ. ನೀನು ಏನು ಬರೆದುಕೊಂಡರೂ ನೆರವೇರುವುದು. ಇದರಲ್ಲಿ ಸಂಶಯವಿಲ್ಲ. ಆದರೆ ನೀನು ಬರೆದುಕೊಳ್ಳಲು ನಿನಗೆ ಐದು ನಿಮಿಷ ಮಾತ್ರ ಸಮಯ, ಆ ಐದು ನಿಮಿಷವೇ ನಿನಗೇ ಅತ್ಯಮೂಲ್ಯ, ಆ ಐದು ನಿಮಿಷ ದಾಟಿದ ನಂತರ ನಿನ್ನ ಹಣೆಬರಹ ಹೇಗಿರುತ್ತೋ ಹಾಗಾಗುವುದು ಎಂದು ಹೇಳಿ ಒಂದು ಪುಸ್ತಕ ಕೊಡುತ್ತಾನೆ. ಆ ವ್ಯಕ್ತಿ ಪುಸ್ತಕ ತೆಗೆದ ತಕ್ಷಣ ಮೊದಲ ಪುಟ ಓದುತ್ತಾನೆ, ಅದರಲ್ಲಿ ನಿನ್ನ ಸ್ನೇಹಿತ ವಿದೇಶಕ್ಕೆ ಹೋಗುತ್ತಾನೆ ಎಂದಿರುತ್ತದೆ. ಅದಕ್ಕೆ ಅವನು ವಿದೇಶಕ್ಕೆ ಹೋಗಬಾರದೆಂದು ಬರೆದು ತಡೆಯುತ್ತಾನೆ.... ಮತ್ತೊಂದು ಪುಟ ತೆರೆಯುತ್ತಾನೆ ಅದರಲ್ಲಿ ಮತ್...